Wednesday, 29th November 2023

12,781 ಕರೋನಾ ಸೋಂಕು ದೃಢ

#corona

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 12,781 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, 24 ಮಂದಿ ಮೃತ ಪಟ್ಟಿದ್ದಾರೆ.

ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,24,873ಕ್ಕೆ ಏರಿಕೆ ಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾ ಲಯ ಸೋಮವಾರ ಬಿಡುಗಡೆಗೊಳಿಸಿ ರುವ ಅಂಕಿಅಂಶದಲ್ಲಿ ತಿಳಿಸಿದೆ.

ಒಂದೇ ದಿನದಲ್ಲಿ 4,226 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 76,700ಕ್ಕೆ ಏರಿಕೆಯಾದಂತಾಗಿದೆ. ಒಂದೇ ದಿನದಲ್ಲಿ 8,537 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶಾದ್ಯಂತ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,27,07,900ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 196.18 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

error: Content is protected !!