Saturday, 27th July 2024

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: 16 ಜನರ ಸಾವು

ವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 16 ಜನರು ಸಾವನ್ನಪ್ಪಿದ್ದಾರೆ.

ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದದಿಂದ ಏಳು ಮಂದಿ ಸಾವನ್ನಪ್ಪಿದ್ದರೆ, ಶಿಮ್ಲಾ ನಗರದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದಲ್ಲಿ ಉಂಟಾದ ಭೂಕುಸಿತದಲ್ಲಿ ಒಂಬತ್ತು ಜನರು ಸಾವನ್ನಪ್ಪಿ ದ್ದಾರೆ ಎಂದು ತಿಳಿಸಿದ್ದಾರೆ.

ಶಿಮ್ಲಾ ನಗರದಲ್ಲಿ ಸಂಭವಿಸಿದ ಎರಡು ಭೂಕುಸಿತಗಳಲ್ಲಿ 15 ರಿಂದ 20 ಮಂದಿ ಸಮಾಧಿಯಾಗಿರುವ ಶಂಕೆ ಇದೆ ಎಂದು ಶಿಮ್ಲಾದ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ತಿಳಿಸಿದ್ದಾರೆ. ಸೋಲನ್‌ನ ಕಂದಘಾಟ್ ಉಪ ವಿಭಾಗದ ಮಾಮ್ಲಿಗ್ ಗ್ರಾಮದಲ್ಲಿ ಮೇಘಸ್ಫೋಟದ ನಂತರ ಆರು ಜನರನ್ನು ರಕ್ಷಿಸಲಾಗಿದೆ. ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿಹೋಗಿದೆ.

ಸೋಲನ್‌ನಲ್ಲಿ ಮೃತರನ್ನು ಹರ್ನಾಮ್ (38), ಕಮಲ್ ಕಿಶೋರ್ (35), ಹೇಮಲತಾ (34), ರಾಹುಲ್ (14), ನೇಹಾ (12), ಗೋಲು (8), ಮತ್ತು ರಕ್ಷಾ (12) ಎಂದು ಗುರುತಿಸಲಾಗಿದೆ.

ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಾವನ್ನಪ್ಪಿದವರಿಗೆ ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!