Friday, 26th July 2024

179 ಹೊಸ ಸೋಂಕು ಪ್ರಕರಣ ಪತ್ತೆ

covid

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 179 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,227 ಕ್ಕೆ ಇಳಿಕೆಯಾಗಿದೆ.

ಈ ಮೂಲಕ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,46,80,936ಕ್ಕೆ ಏರಿಕೆಯಾಗಿದ್ದು, ಈವರೆಗೆ 5,30,726 ಮಂದಿ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.16 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.

error: Content is protected !!