Sunday, 23rd June 2024

305 ಹೊಸ ಕೋವಿಡ್-19 ಪ್ರಕರಣ ದೃಢ

ವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 305 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,439 ಕ್ಕೆ ಇಳಿಕೆಯಾಗಿದೆ.

ಒಂದು ದಿನದ ಅವಧಿಯಲ್ಲಿ ಕೋವಿಡ್‌-19 ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಈ ಪೈಕಿ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗುಜರಾತ್‌ನ ತಲಾ ಒಬ್ಬರು ಎಂದು ವರದಿಯಾಗಿದೆ.

2023ರ ಡಿಸೆಂಬರ್ 5ರವರೆಗೆ ದೈನಂದಿನ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು. ಹೊಸ ರೂಪಾಂತರಿ ಮತ್ತು ಶೀತ ಹವಾಮಾನದಿಂದಾಗಿ ಪ್ರಕರಣಗಳು ಸಂಖ್ಯೆ ಮತ್ತೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ 2020ರ ಆರಂಭದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗದ ಪ್ರಕರಣಗಳು ವರದಿಯಾದವು. ಸುಮಾರು ನಾಲ್ಕು ವರ್ಷಗಳಲ್ಲಿ ರಾಷ್ಟ್ರ ದಾದ್ಯಂತ 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದರು. ಇದರಲ್ಲಿ 5.3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ದೇಶದಾದ್ಯಂತ ಕೋವಿಡ್-19 ಸೋಂಕಿನಿಂದ 4.4 ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಶೇ.98.81ರಷ್ಟು ಮಂದಿ ಚೇತರಿಸಿ ಕೊಂಡಿದ್ದಾರೆ. ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!