Sunday, 23rd June 2024

774 ಹೊಸ ಕೋವಿಡ್ 19 ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದ್ದು, ತಮಿಳುನಾಡು ಮತ್ತು ಗುಜರಾತ್ನಿಂದ ತಲಾ ಒಬ್ಬರು ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ. ಡಿಸೆಂಬರ್ 31, 2023 ರಂದು ದೇಸದಲ್ಲಿ 841 ಗರಿಷ್ಠ ಪ್ರಕರಣಗಳು ವರದಿಯಾಗಿತ್ತು. ದೇಶದಲ್ಲೆಡೆ ಹವಾಮಾನ ಬದಲಾಗಿದ್ದು, ಶೀತ ವಾತವಾರಣದಿಂದಾಗಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿ, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,17,378 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,387ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,44,79,804ಕ್ಕೆ ತಲುಪಿದೆ.

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!