Saturday, 27th July 2024

ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣ: ರಾಹುಲ್ ಗೆ ಜಾಮೀನು

ತ್ತರ ಪ್ರದೇಶ: ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಉತ್ತರಪ್ರದೇಶದ ಸುಲ್ತಾನ್ ಪುರ ಕೋರ್ಟ್ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ.

2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆ ಯಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದರು. ಗಾಂಧಿಯವರು ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರ ನಕಲಿ ಎನ್‌ಕೌಂಟರ್ ಪ್ರಕರಣದಿಂದ 2014 ರಲ್ಲಿ ಷಾ ಅವರನ್ನು ಬಿಡುಗಡೆ ಮಾಡಿತ್ತು.

ಇದು 2018 ರ ಪ್ರಕರಣವಾಗಿದ್ದು, ಇದರಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು.

Leave a Reply

Your email address will not be published. Required fields are marked *

error: Content is protected !!