Saturday, 27th July 2024

ಸಾರ್ವಜನಿಕ ಸಭೆ, ರ‍್ಯಾಲಿಗಳ ನಿಷೇಧಿಸಿದ ಆಂಧ್ರ ಸರ್ಕಾರ

ಮರಾವತಿ: ಆಂಧ್ರ ಪ್ರದೇಶ ಸರ್ಕಾರ ಸಾರ್ವಜನಿಕ ಸಭೆ ಮತ್ತು ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಕಾಲ್ತುಳಿತದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯ ಸರಕಾರ ಈ ನಿರ್ಧಾರ ತೆಗೆದುಕೊಂಡಿದೆ.

ತೆಲುಗು ದೇಶಂ ಪಕ್ಷದ ನಾಯಕ ಚಂದ್ರ ಬಾಬು ನಾಯ್ಡು ಅವರ ನೇತೃತ್ವದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಘಟಿಸಿದ ಕಾಲ್ತುಳಿತದಿಂದ ಒಟ್ಟು ಎಂಟು ಮಂದಿ ಮೃತಪಟ್ಟಿದ್ದರು.

ಡಿಸೆಂಬರ್ 28ರಂದು ನೆಲ್ಲೂರು ಜಿಲ್ಲೆಯ ಕಂಡುಕುರಿನಲ್ಲಿ ನಡೆದ ಮೊದಲ ಕಾರ್ಯಕ್ರಮ ದಲ್ಲಿ ಕಾಲ್ತುಳಿತದಿಂದ ಏಳು ಮಂದಿ ಮೃತಪಟ್ಟಿದ್ದರು. ಗುಂಟೂರಿನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಮಹಿಳೆಯೂ ಸೇರಿದಂತೆ ಮೂವರು ಸಾವನ್ನಪ್ಪಿದರು. ಹಲವಾರು ಮಂದಿ ಗಾಯಗೊಂಡಿದ್ದರು.

ಸರ್ಕಾರದ ಆದೇಶದ ಪ್ರಕಾರ ಆಂಧ್ರ ಪ್ರದೇಶದಲ್ಲಿ ಇನ್ನೂ ಮುಂದೆ ಯಾವುದೇ ಸಾರ್ವಜನಿಕ ಸಮಾರಂಭ ಮತ್ತು ರ‍್ಯಾಲಿಗಳನ್ನು ನಡೆಸಲು ಅವಕಾಶ ಇಲ್ಲ.

ತಮ್ಮ ಪಕ್ಷದ ಕಾರ್ಯಕರ್ತರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದ ಚಂದ್ರಬಾಬು ನಾಯ್ಡು, ಮೃತರ ಕುಟುಂಬಕ್ಕೆ ಪರಿಹಾರ ನೀಡಿ, ಅವರ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ತಾವೇ ಹೊತ್ತುಕೊಳ್ಳುವುದಾಗಿ ತಿಳಿಸಿದರು.

 
Read E-Paper click here

 

error: Content is protected !!