Sunday, 28th April 2024

ಕರೋನಾ ಪ್ರಕರಣ ಶೇ.41ರಷ್ಟು ಏರಿಕೆ

#corona

ನವದೆಹಲಿ: ಮೂರು ತಿಂಗಳ ನಂತರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಶೇ.41ರಷ್ಟು ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 5233 ಜನರಿಗೆ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆ ಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 7 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 3,345 ಸೋಂಕಿತರು ಗುಣಮುಖರಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,190,282ಕ್ಕೆ ಏರಿಕೆ ಯಾಗಿದೆ. ಇದರ ಹೊರತಾಗಿ, ಇದು ವರೆಗೂ 42,636,710 ಸೋಂಕಿತರು ಗುಣಮುಖ ರಾಗಿದ್ದು, 524,715 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಓಮಿಕ್ರಾನ್ ರೂಪಾಂತರದ B.A.5 ತಳಿಯ ಪ್ರಕರಣ ವರದಿಯಾಗಿದೆ.

ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,90,282ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,715ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,857ಕ್ಕೆ ಇಳಿಕೆಯಾಗಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,94,43,26,416 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

 

error: Content is protected !!