Friday, 26th July 2024

760 ಹೊಸ ಕೋವಿಡ್ 19 ಪ್ರಕರಣ, 2 ಸಾವು

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 760 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 760 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,15,843 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,423ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,373ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,44,78,047ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ, ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!