Sunday, 28th April 2024

ಕರೋನಾ: 170 ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 170 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,80,094ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,721ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,371ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 221 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 44147002ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ 2,20,14,06,483 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

Read E-Paper click here

error: Content is protected !!