Saturday, 27th July 2024

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಜಾಮೀನು ಮಂಜೂರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಸೇರಿದಂತೆ ಐವರು ಆರೋಪಿಗಳಿಗೆ ದೆಹಲಿಯ ಇಡಿ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ, ಬಿಗ್ ರಿಲೀಫ್ ನೀಡಿದೆ.

ಈ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜಾರಿ ನಿರ್ದೇಶನಾಲಯದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶ ವಿಕಾಸ್ ಧುಲ್ ಅವರು, ಡಿ.ಕೆ.ಶಿವಕುಮಾರ್ ಸೇರಿದಂತೆ ಐವರಿಗೆ ತಲಾ 1 ಲಕ್ಷ ಭದ್ರತಾ ಠೇವಣಿ, ಸಾಕ್ಷಿ ನಾಶ ಮಾಡದಂತೆ ಹಾಗು ದೇಶ ಬಿಟ್ಟು ಹೋಗದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.

ಅಂದ ಹಾಗೆ ಕಳೆದ ಶನಿವಾರ ಈ ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಇಡಿ ವಿಶೇಷ ಕೋರ್ಟ್, ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇದೀಗ ತನ್ನ ಡಿಕೆ ಶಿವಕುಮಾರ್, ಉದ್ಯಮಿ ಸಚಿನ್ ನಾರಾಯಣ್, ಶರ್ಮಾ ಟ್ರಾನ್ಸ್ ಪೋರ್ಟ್ ಮಾಲೀಕ ಸುನೀಲ್ ಕುಮಾರ್ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ, ರಾಜೇಂದ್ರ ಎನ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

error: Content is protected !!