Tuesday, 16th April 2024

ಗುಜರಾತ್: ನಾಳೆ ಮೊದಲ ಹಂತದ ಚುನಾವಣೆ

ಹಮಾದಾಬಾದ್: ಗುಜರಾತ್ 89 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದ ಚುನಾವಣೆ ನಡೆಯಲಿದ್ದು, 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕಚ್ ಮತ್ತು ಸೌ ರಾಷ್ಟ್ರ ವಲಯದ ಈ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಮಹತ್ವ ವೆನಿಸಿದೆ. ಅಮ್ ಆದ್ಮಿ ಪಕ್ಷದ ಮುಖ್ಯ ಮಂತ್ರಿ ಅಭ್ಯರ್ಥಿ ಇಸುಧನ್ ಗಾಡ್ವಿ ಸೇರಿದಂತೆ ಅನೇಕ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2,39,76,760 ಮತದಾರರು ನಾಳೆ ಮತದಾನ ಮಾಡಲಿದ್ದಾರೆ.

ಡಿ.5ರಂದು ನಡೆಯುವ 2ನೇ ಹಂತದ ಚುನಾವಣೆಗೆ ಅಬ್ಬರದ ಪ್ರಚಾರದ ಜೊತೆಗೆ ಮೊದಲ ಹಂತಕ್ಕೆ ಚುನಾವಣೆ ನಡೆಯುತ್ತಿದೆ.

ಬುಡಕಟ್ಟು ಮತ್ತು ನಗರೀಕರಣದ ಮಿಶ್ರ ಸಂಸ್ಕøತಿ ಹೊಂದಿರುವ ವಲಯದಲ್ಲಿ 2017ರ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು. ನಂತರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿ ನಿರಂತರವಾಗಿ ಮೇಲುಗೈ ಸಾಧಿಸಿದೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ 89 ಕ್ಷೇತ್ರಗಳ ಪೈಕಿ 37 ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ.

ಈ ಬಾರಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಸ್ಪರ್ಧೆ ನಡುವೆ ಅಮ್ ಆದ್ಮಿ ಪೈಪೋಟಿ ನೀಡುತ್ತಿದೆ. ಪ್ರಧಾನಿ ನರೇಂದ್ರಮೋದಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿ ಪರವಾಗಿ ಪ್ರಚಾರ ನಡೆಸಿದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಹಿರಿಯ ನಾಯಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ.

error: Content is protected !!