Tuesday, 23rd April 2024

ಈಶಾನ್ಯ ಭಾರತ, ಪಶ್ಚಿಮ ಹಿಮಾಲಯದಲ್ಲಿ ಭಾರೀ ಮಳೆ ನಿರೀಕ್ಷೆ

ವದೆಹಲಿ: ಈಶಾನ್ಯ ಭಾರತ ಮತ್ತು ಪಶ್ಚಿಮ ಹಿಮಾಲಯದ ಕೆಲವು ಭಾಗಗಳಲ್ಲಿ ಮುಂದಿನ 4 ರಿಂದ 5 ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ಐದು ದಿನಗಳಲ್ಲಿ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಯಿದೆ.

ಸೆ.2 ಮತ್ತು 3 ರಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸೆ.2 ಮತ್ತು 3 ರಂದು ಬಿಹಾರದ ಮೇಲೆ ಪ್ರತ್ಯೇಕವಾದ ಭಾರೀ ಮಳೆ ಮತ್ತು ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ಯಾಗುವ ಸಾಧ್ಯತೆಯಿದೆ.

ಸೆ.2 ರಂದು ಸಬ್-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾದ ಮತ್ತು ಅತ್ಯಂತ ಭಾರೀ ಮಳೆಯಾ ಗಲಿದ್ದು, ಸೆಪ್ಟೆಂಬರ್ 3 ಮತ್ತು 4 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ಕೇರಳ, ಮಾಹೆ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ.

error: Content is protected !!