Sunday, 19th May 2024

ಬಿಆರ್​ಎಸ್​ ನಾಯಕಿ ಕೆ.ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ.

ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ.ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಕೆ.ಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು.

ಸಿಬಿಐ, , ಜಾರಿ ನಿರ್ದೇಶನಾಲಯವು ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ಆದೇಶ ಹೊರಡಿಸಿದರು.
ವಿಚಾರಣೆ ವೇಳೆ ಇಡಿ ತನಿಖೆಯ ಪ್ರಮುಖದ ಹಂತದಲ್ಲಿದೆ ಒಂದು ವಾರದ ಒಳಗಾಗಿ ಕವಿತಾ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಬಹುದು ಎಂದು ತಿಳಿಸಿತು.

ಜಾರಿ ನಿರ್ದೇಶನಾಲಯ (ಇಡಿ) ಮಾರ್ಚ್ 15 ರಂದು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ (46) ಅವರನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!