Sunday, 28th April 2024

ಸುಳ್ಳು ಭರವಸೆಗಾಗಿ ಮೋದಿ, ಕೇಜ್ರಿವಾಲ್ ಭಾಷಣ ಕೇಳಿ: ರಾಗಾ

ಚಂಡೀಗಢ: ನಿಮಗೆ ಸುಳ್ಳು ಭರವಸೆ ಕೇಳಲು ಪ್ರಧಾನಿ ಮೋದಿ ಹಾಗೂ ಕೇಜ್ರಿವಾಲ್ ಭಾಷಣ ಕೇಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಂಜಾಬ್ ಜನತೆಗೆ ಹೇಳಿದ್ದಾರೆ.

ನಾನು ಸತ್ಯವನ್ನೆ ಹೇಳುತ್ತೇನೆ ಸುಳ್ಳು ಭರವಸೆ ನೀಡುವುದಿಲ್ಲ, ಸುಳ್ಳು ಭರವಸೆ ಕೇಳ ಬಯಸಿದರೆ ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅಕಾಲಿ ನಾಯಕ ಸುಖ್ಬೀರ್ ಸಿಂಗ್ ಬಾದಲ್ ಅವರ ಭಾಷಣಗಳನ್ನು ಕೇಳಬೇಕು ಎಂದಿದ್ದಾರೆ.

‘ನವಿ ಸೋಚ್ ನವ ಪಂಜಾಬ್’ ಎಂಬ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಮಾತನಾಡಿದರು.

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ “ಪ್ರಯೋಗ” ಕ್ಕೆ ಹೋಗದಂತೆ ಪಂಜಾಬ್‌ನ ಮತದಾರರಿಗೆ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದರು, ಗಡಿ ರಾಜ್ಯಕ್ಕೆ ಶಾಂತಿ ಕಾಪಾಡುವುದು ಅತ್ಯಂತ ಮುಖ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾದ್ಯ. 2014ಕ್ಕೂ ಮುನ್ನ ಪ್ರಧಾನಿ ಮೋದಿ ಪ್ರತಿಯೊಬ್ಬರ ಖಾತೆಯಲ್ಲಿ 15 ಲಕ್ಷ ರೂ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದ್ಯಾವುದನ್ನೂ ಮಾಡಿಲ್ಲ ಎಂದರು.

ದೇಶದಲ್ಲಿ ಈ ಮೊದಲು ಕಪ್ಪುಹಣ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಈಗ ಏಕೆ ಉದ್ಯೋಗ ಮತ್ತು ಕಪ್ಪುಹಣದ ಬಗ್ಗೆ ಮಾತನಾಡುತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರಶ್ನಿಸಿ ದರು.

ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಬಡತನವನ್ನು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ.  ಪಂಜಾಬ್‌ನಲ್ಲಿ ಫೆ.20ರಂದು ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರಬರಲಿದೆ.

 

error: Content is protected !!