Sunday, 19th May 2024

ಜು.12 ರಂದು ಪ್ರಧಾನಿ ದಿಯೋಘರ್, ಬಿಹಾರದ ಪಾಟ್ನಾ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜು.12 ರಂದು ಜಾರ್ಖಂಡ್‌ನ ದಿಯೋ ಘರ್ ಮತ್ತು ಬಿಹಾರದ ಪಾಟ್ನಾಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿದಿಯೋಘರ್‌ನಲ್ಲಿ 16 ಸಾವಿರ ಕೋಟಿ ರೂ.ಗಿಂತ ಹೆಚ್ಚಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸಲಿದ್ದಾರೆ ಎನ್ನಲಾಗುತ್ತಿದೆ.

 

ದೇಶಾದ್ಯಂತ ಭಕ್ತರಿಗೆ ಪ್ರಮುಖ ಧಾರ್ಮಿಕ ತಾಣ ಬಾಬಾ ಬೈದ್ಯನಾಥ ಧಾಮಕ್ಕೆ ನೇರ ಸಂಪರ್ಕವನ್ನು ಒದಗಿಸುವ ಪ್ರಮುಖ ಹಂತವಾಗಿ ದಿಯೋಘರ್ ವಿಮಾನ ನಿಲ್ದಾಣವನ್ನು ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಜಾರ್ಖಂಡ್‌ನಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿದ ನಂತರ ಪ್ರಧಾನಿ ಬಿಹಾರಕ್ಕೆ ತೆರಳ ಲಿದ್ದು, ಅಲ್ಲಿ ಬಿಹಾರ ವಿಧಾನಸಭೆಯ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಿಹಾರ ವಿಧಾನಸಭೆಯ 100 ವರ್ಷಗಳ ನೆನಪಿಗಾಗಿ ನಿರ್ಮಿಸಲಾದ ಶತಾಬ್ದಿ ಸ್ಮೃತಿ ಸ್ತಂಭವನ್ನು ಪ್ರಧಾನಿ ಮೋದಿ ಉದ್ಘಾಟಿಸ ಲಿದ್ದಾರೆ. ವಿಧಾನಸೌಧದ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮ್ಯೂಸಿಯಂನಲ್ಲಿರುವ ವಿವಿಧ ಗ್ಯಾಲರಿ ಗಳು ಬಿಹಾರದ ಪ್ರಜಾಪ್ರಭುತ್ವದ ಇತಿಹಾಸ ಮತ್ತು ಪ್ರಸ್ತುತ ನಾಗರಿಕ ರಚನೆಯ ವಿಕಾಸವನ್ನು ಪ್ರದರ್ಶಿಸುತ್ತವೆ.

ಇದು 250ಕ್ಕೂ ಹೆಚ್ಚು ವ್ಯಕ್ತಿಗಳ ಸಾಮರ್ಥ್ಯದ ಕಾನ್ಫರೆನ್ಸ್ ಹಾಲ್ ಅನ್ನು ಸಹ ಹೊಂದಿರುತ್ತದೆ. ಈ ಸಂದರ್ಭದಲ್ಲಿ ವಿಧಾನ ಸೌಧದ ಅತಿಥಿ ಗೃಹದ ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಲಿದ್ದಾರೆ.

error: Content is protected !!