Tuesday, 28th May 2024

ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ಅಯೋಧ್ಯೆ: ಪ್ರಧಾನಿ ಮೋದಿ ಅವರು ಶನಿವಾರ ಅಯೋಧ್ಯೆಗೆ ತೆರಳಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಮುನ್ನ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಆರಂಭಿಸಿದರು.

ಅಯೋಧ್ಯೆಯ ಪ್ರಮುಖ ರಸ್ತೆಯಲ್ಲಿ ಮೋದಿ ಬರೋಬ್ಬರಿ 15 ಕಿ.ಮೀ ರೋಡ್ ಶೋ ನಡೆಸಿದರು. ರಾಮಪತ್ ಮಾರ್ಗದ ಮೂಲಕ ಪ್ರಧಾನಿ ಮೋದಿ ರೋಡ್ ಶೋ ಸಾಗುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನರು ಪ್ರಧಾನಿ ಮೋದಿಯನ್ನು ವೀಕ್ಷಿಸುತ್ತಿದ್ದಾರೆ. ಮೋದಿ ಜನರತ್ತ ಕೈ ಬೀಸುತ್ತಾ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದೆ.

ರೈಲ್ವೆ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶಾ ದ್ಯಂತದ ವಿವಿಧ ಕಲಾವಿದರ ತಂಡ ಶನಿವಾರ ಸ್ವಾಗತಿಸಿದವು.

ಪ್ರಧಾನಿ ನರೇಂದ್ರ ಮೋದಿ ಅವರು 15,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.

ಆರು ವಂದೇ ಭಾರತ್, ಎರಡು ಅಮೃತ್ ಭಾರತ್ ರೈಲುಗಳು ಮತ್ತು ಇತರ ರೈಲು ಯೋಜನೆಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು.

 

Leave a Reply

Your email address will not be published. Required fields are marked *

error: Content is protected !!