Saturday, 27th April 2024

ಸೇತುವೆ ಕುಸಿತ ಪ್ರಕರಣ: ಸಂಸದರ ಕುಟುಂಬದ 12 ಸದಸ್ಯರ ಸಾವು

ಮೋರ್ಬಿ: ಗುಜರಾತ್​ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯ ದಾದ ಸೇತುವೆ ಕುಸಿದು ಬಿದ್ದ ದುರಂತ ದಲ್ಲಿ ಬಿಜೆಪಿ ಸಂಸದ ಮೋಹನ್ಭಾಯ್ ಕಲ್ಯಾಣ್ಜಿ ಕುಂದರಿಯಾ ಕುಟುಂಬದ 12 ಸದಸ್ಯರು ಮೃತಪಟ್ಟಿದ್ದಾರೆ.
ಮೋಹನ್ಭಾಯ್ ಕಲ್ಯಾಣ್ಜಿ ಕುಂದರಿಯಾ ಅವರು, “ನಾನು ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
“ಎಸ್ಡಿಆರ್ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಅಪಘಾತದಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಿಸಲಾಗಿದೆ ಮತ್ತು ಮಚ್ಚು ನದಿಯಲ್ಲಿದ್ದವರ ಶವಗಳನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ.
ರಕ್ಷಣಾ ದೋಣಿಗಳು ಕೂಡ ಸ್ಥಳದಲ್ಲಿವೆ” ಎಂದು ತಿಳಿಸಿದ್ದಾರೆ.
ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು, ಸತ್ತವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು, ಸ್ಥಳೀಯರು ಮತ್ತು ಎನ್ಜಿಒಗಳು ಇದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ.
error: Content is protected !!