Sunday, 21st April 2024

ಮುಂಬೈ, ಮಧುರೈನ ವಿವಿಧೆಡೆ ಎನ್​ಐಎ ದಾಳಿ

ತಮಿಳುನಾಡು/ ಮಹಾರಾಷ್ಟ್ರ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ಎನ್​ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಎನ್​ಐಎ ಅಧಿಕಾರಿಗಳು ನಿಷೇಧಿತ ಸಂಘಟನೆ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಮುಖಂಡರ ಮನೆ ಮೇಲೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ತಮಿಳುನಾಡಿನ ಮಧುರೈ ಜಿಲ್ಲೆಯ ಹಲವು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಜಿಮಾರ್ ಸ್ಟ್ರೀಟ್​ನಲ್ಲಿ ಅಧಿಕಾರಿಗಳು ಕಾರ್ಯಾ ಚರಣೆ ನಡೆಸಿದ್ದಾರೆ. ಜಮಾತ್​ ಹಿಂದ್​ ಮೂವ್​ಮೆಂಟ್​ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್​ ತಾಜುದ್ದೀನ್​ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ​. ಈ ಸಂಘಟನೆ ಹಲವರು ಸರ್ಕಾರದ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಡೆಸು ತ್ತಿರುವುದಾಗಿ ಎನ್​ಐಎ ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2006ರ ಮುಂಬೈ ರೈಲ್​ ಬಾಂಬ್​ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ವಾಹಿದ್ ಶೇಖ್​ನ ಮನೆ ಮೇಲೆ ಎನ್​ಐಎ ದಾಳಿ ನಡೆಸಿದೆ. ವಿಖ್ರೋ​ಲಿಯಲ್ಲಿರುವ ಆರೋಪಿಯ ಮನೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!