Tuesday, 30th May 2023

ಬಿಟ್ ಕಾಯಿನ್ ಚಿಂತೆ ಬಿಡಿ, ದಿಟ್ಟತನದಿಂದ ಕೆಲಸ ಮುಂದುವರೆಸಿ: ಪ್ರಧಾನಿ ಮೋದಿ ಅಭಯ

ನವದೆಹಲಿ: ಸಿಎಂ ಬೊಮ್ಮಾಯಿ, ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಜೊತೆ ಯಾವುದೇ ಚರ್ಚೆ ಆಗಿಲ್ಲ. ನಾನೇ ಬಿಟ್ ಕಾಯಿನ್ ವಿಚಾರವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆ. ಆದರೆ ಬಿಟ್ ಕಾಯಿನ್ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ, ದಿಟ್ಟತನ ದಿಂದ ನಿಮ್ಮ ಕೆಲಸ  ಮುಂದು ವರೆಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾ ಗಿದೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನ ನೀಡಿದ್ದೇನೆ. ಆದರೆ ಬಿಟ್ ಕಾಯಿನ್ ಹಗರಣದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಾವು ನೂರು ದಿನದಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದೆವು. ಡಿಸೆಂಬರ್ ನಲ್ಲಿ ಬೆಂಗಳೂರಿಗೆ ಬರುವಂತೆ ಆಹ್ವಾನಿಸಿದ್ದೇನೆ. 4 ಕಾರ್ಯಕ್ರಮಗಳಿಗೆ ಬರಲು ಆಹ್ವಾನಿಸಲಾಗಿದೆ ಎಂದು ಹೇಳಿದರು.

error: Content is protected !!