Saturday, 27th July 2024

ಯಾವುದೇ ಧಮ್​ ಇಲ್ಲದ ಅರ್ಜಿ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್​

ನವದೆಹಲಿ: ಹಿಂದೂಗಳು, ಜೈನರು, ಬೌದ್ಧರು ಹಾಗೂ ಸಿಖ್ಖರು ಧಾರ್ಮಿಕ ಸ್ಥಳಗಳನ್ನು ಸ್ಥಾಪನೆ ಮಾಡುವ ಹಾಗೂ ನಿರ್ವಹಣೆ ಮಾಡುವ ಹಕ್ಕು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ತಳ್ಳಿ ಹಾಕಿದೆ.

ಇದು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ ಇದರಲ್ಲಿ ಪ್ರವೇಶಿಸಲು ನ್ಯಾಯಾಲಯ ಇಚ್ಛಿಸುವುದಿಲ್ಲ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್​ ನೇತೃತ್ವದ ನ್ಯಾಯಪೀಠ, ಉಪಾಧ್ಯಾಯರೇ, ಸೂಕ್ತ ಅರ್ಜಿ ಸಲ್ಲಿಕೆ ಮಾಡಿ. ಇದಕ್ಕೆ ಪರಿಹಾರ ನೀಡಲು ಸಾಧ್ಯವೇ,.? ಇಂಥಹ ಅರ್ಜಿಗಳನ್ನು ಹಿಂತೆಗೆದುಕೊಳ್ಳಿ. ಇವುಗಳಲ್ಲಿ ಯಾವುದೇ ಧಮ್​ ಇಲ್ಲ. ಈ ಅರ್ಜಿಯು ವಿಚಾರಣೆಗೆ ಅರ್ಹವೇ ಅಲ್ಲ ಎಂದು ಹೇಳಿದೆ.

ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಕೀಲ ಆಶ್ವಿನಿ ಉಪಾಧ್ಯಾಯ ಸಲ್ಲಿಕೆ ಮಾಡಿದ್ದರು. ಮುಸ್ಲಿಮರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಂತೆ ಹಿಂದೂ ಗಳು, ಜೈನರು, ಬೌದ್ಧರು ಮತ್ತು ಸಿಖ್ಖರು ತಮ್ಮ ಧಾರ್ಮಿಕ ಸ್ಥಳಗಳನ್ನು ಸ್ಥಾಪಿಸುವ, ನಿರ್ವಹಿಸುವ ಮತ್ತು ನಿರ್ವಹಿಸುವ ಹಕ್ಕನ್ನು ನೀಡಬೇಕು ಎಂದು ಈ ಅರ್ಜಿಯಲ್ಲಿ ಒತ್ತಾಯಿಸಲಾಗಿತ್ತು.

ಈ ಅರ್ಜಿಯಲ್ಲಿ ಅಶ್ವಿನಿ ಉಪಾಧ್ಯಾಯ ದೇಶಾದ್ಯಂತ ಹಿಂದೂ ದೇವಾಲಯಗಳ ಮೇಲೆ ಸರ್ಕಾರದ ನಿಯಂತ್ರಣವನ್ನೂ ಅವರು ಪ್ರಶ್ನಿಸಿದ್ದರು. . ದೇಶದಾದ್ಯಂತ ಇರುವ ಸರಿಸುಮಾರು ಒಂಬತ್ತು ಲಕ್ಷ ಹಿಂದೂ ದೇವಾಲಯಗಳಲ್ಲಿ ಸುಮಾರು ನಾಲ್ಕು ಲಕ್ಷವು ಸರ್ಕಾರದ ನಿಯಂತ್ರಣದಲ್ಲಿದೆ.

Leave a Reply

Your email address will not be published. Required fields are marked *

error: Content is protected !!