Sunday, 19th May 2024

ಡಿ.ವೈ.ಚಂದ್ರಚೂಡ್ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾ: 1 ಲಕ್ಷ ರೂ. ದಂಡ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ 1 ಲಕ್ಷ ರೂ. ದಂಡದೊಂದಿಗೆ ವಜಾಗೊಳಿಸಿದೆ.
ಇದೊಂದು ಪ್ರಚಾರ ಹಿತಾಸಕ್ತಿಯ ದಾವೆ ಎಂದು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. ಕೇವಲ ಪ್ರಚಾರದ ಉದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿತು.
ಸಂವಿಧಾನಕ್ಕೆ ವಿರುದ್ಧವಾಗಿ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಮುಖ್ಯ ನ್ಯಾಯ ಮೂರ್ತಿಯನ್ನಾಗಿ ನೇಮಕ ಮಾಡ ಲಾಗಿದೆ ಎಂದು ಗ್ರಾಮ ಉದಯ ಫೌಂಡೇಷನ್ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿ ಸಂಜೀವ್ ಕುಮಾರ್ ತಿವಾರಿ ಅರ್ಜಿ ಸಲ್ಲಿಸಿದ್ದರು.
ನ್ಯಾ.ಚಂದ್ರಚೂಡ್ ಅವರು ನ.9 ರಂದು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು.
error: Content is protected !!