Saturday, 27th July 2024

ಭಿವಂಡಿಯ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಅಗ್ನಿ ಅವಗಢ

ಠಾಣೆ: ‘ಮಹಾರಾಷ್ಟ್ರದ ಭಿವಂಡಿ ಪಟ್ಟಣದ ವಿದ್ಯುತ್ ಮಗ್ಗ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ.

ನೈಗಾಂವ್ ರಸ್ತೆಯಲ್ಲಿರುವ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ’ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಪ್ರಾದೇಶಿಕ ಮುಖ್ಯಸ್ಥ ಸಂತೋಷ್‌ ಖದಂ ಹೇಳಿದರು.

ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಸತತ ಎರಡು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ಯನ್ನು ನಂದಿಸಿದರು. ಕಾರ್ಖಾನೆಗೆ ಬೆಂಕಿ ಹೇಗೆ ತಗುಲಿತು ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!