Wednesday, 24th April 2024

ಪಂಜಾಬ್‌ನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ಚಂಡೀಗಢ : ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಬುಧವಾರ ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಖಟ್ಕರ್ ಕಲಾನ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಭಗವಂತ್ ಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಪಂಜಾಬ್ ಸಹ-ಪ್ರಭಾರಿ ರಾಘವ್ ಚಡ್ಡಾ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪಂಜಾಬ್ ವಿಧಾನಸಭೆ ಚುನಾವಣೆ 2022ರಲ್ಲಿ, ಆಮ್ ಆದ್ಮಿ ಪಕ್ಷವು ದೊಡ್ಡ ಗೆಲುವು ಸಾಧಿಸಿತು ಮತ್ತು ಮೂರನೇ ಎರಡರಷ್ಟು ಬಹುಮತವನ್ನು ಪಡೆ ಯಿತು.

ಭಗವಂತ್ ಮಾನ್ ಹಾಸ್ಯನಟನಾಗಿ ವೃತ್ತಿಜೀವನ ಪ್ರಾರಂಭಿಸಿದರು. 2008 ರಲ್ಲಿ ಕಾಮಿಡಿಯನ್ ಕಪಿಲ್ ಶರ್ಮಾ ಜೊತೆ ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಟಿವಿ ಶೋನಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಿಂದ ಭಗವಂತ್ ಮಾನ್ ಸಾಕಷ್ಟು ಜನಪ್ರಿಯತೆ ಪಡೆದರು. ಭಗವಂತ್ ಹಾಸ್ಯದ ಜೊತೆಗೆ ನಟನೆಯಲ್ಲಿ ತುಂಬಾ ಆಸಕ್ತಿ ಹೊಂದಿದ್ದ ಕಾರಣ ಸಿನಿ ರಂಗಕ್ಕೆ ಎಂಟ್ರಿ ನೀಡಿದರು.

ಆಮ್ ಆದ್ಮಿ ಪಕ್ಷವು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಮೂಲಕ ಸ್ಪರ್ಧಿಸಿ ಐತಿಹಾಸಿಕ ಗೆಲುವು ದಾಖಲಿಸಿದೆ. 

error: Content is protected !!