Thursday, 30th November 2023

ರಾಜ್ ಭರ್ ಗೆ ‘ವೈ’ ಕೆಟಗರಿ ಭದ್ರತೆ

 

ಲಖನೌ: ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್ ಭರ್ ಗೆ ಉತ್ತರ ಪ್ರದೇಶ ಸರ್ಕಾರ ‘ವೈ’ ಕೆಟಗರಿ ಯ ಭದ್ರತೆ ನೀಡಿರುವುದಾಗಿ ವರದಿಯಾಗಿದೆ. ಈ ಭದ್ರತೆಯಡಿ ಇಬ್ಬರು ಆಪ್ತ ಭದ್ರತಾ ಅಧಿಕಾರಿ ಗಳು ಸೇರಿದಂತೆ 11 ಭದ್ರತಾ ಸಿಬ್ಬಂದಿ ಯನ್ನು ಒದಗಿಸಲಾಗುತ್ತದೆ.

ಜು.18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತ ಚಲಾಯಿಸಿದ ಕಾರಣಕ್ಕೆ ರಾಜ್ ಭರ್ ಗೆ ವೈ ಕೆಟಗರಿಯ ಭದ್ರತೆ ಒದಗಿಸಲಾಗಿದೆ.

ಎಸ್ ಬಿಎಸ್ ಪಿ ಅಧ್ಯಕ್ಷ ರಾಜ್ ಭರ್ ಗೆ ವೈ ಕೆಟಗರಿ ಭದ್ರತೆ ಒದಗಿಸಲು ನಿರ್ಧರಿಸಲಾಗಿದೆ ಎಂದು ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ವಿನಕ್ ಕುಮಾರ್ ಸಿಂಗ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮೈತ್ರಿಯೊಂದಿಗೆ ಎಸ್ ಬಿಎಸ್ ಪಿ ಸ್ಪರ್ಧಿಸಿತ್ತು.

error: Content is protected !!