Saturday, 27th July 2024

ಶೇ.4 ರಷ್ಟು ಮೀಸಲಾತಿ ರದ್ದು ಆದೇಶಕ್ಕೆ ಮೇ 9 ರವರೆಗೆ ತಡೆ

ನವದೆಹಲಿ: ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದುಗೊಳಿಸುವ ಕರ್ನಾಟಕ ಸರಕಾರದ ಆದೇಶ ಮೇ 9 ರವರೆಗೆ ಅನುಷ್ಠಾನ ವಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಮುಂದಿನ ವಿಚಾರಣೆ ಮೇ 9 ರವರೆಗೂ ಮುಸ್ಲಿಮರಿಗೆ ಈ ಹಿಂದೆ ಇದ್ದ ಶೇ. 4 ರಷ್ಟು ಕೋಟಾ ಮುಂದುವರೆಯುತ್ತದೆ ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. ಮುಂದಿನ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.

ಸಾಲಿಸಿಟರ್ ಜನರಲ್ ಆಗಿ ಸಲಿಂಗ ವಿವಾಹಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಆಲಿಸು ತ್ತಿರುವ ಸಾಂವಿಧಾನಿಕ ಪೀಠದ ಮುಂದೆ ವಾದಿಸುತ್ತಿರುವ ಕಾರಣ ವೈಯಕ್ತಿಕವಾಗಿ ತೊಂದರೆಯಲ್ಲಿದ್ದು, ಬೇರೆ ದಿನದಂದು ಈ ವಿಷಯದ ವಿಚಾರಣೆ ನಡಸಬೇಕು ಎಂದು ಮನವಿ ಮಾಡಿದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ದುಶ್ಯಂತ್ ದವೆ, ಮೆಹ್ತಾ ಮನವಿ ಯನ್ನು ವಿರೋಧಿಸಿದರು ಮತ್ತು ವಿಚಾರಣೆಯನ್ನು ಈಗಾಗಲೇ ನಾಲ್ಕು ಬಾರಿ ಮುಂದೂಡ ಲಾಗಿದೆ. ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವು ಈಗಾಗಲೇ ಅರ್ಜಿದಾರರ ಪರವಾಗಿದೆ ಎಂದು ತಿಳಿಸಿದರು.

ಮುಸಲ್ಮಾನರ ಕೋಟಾವನ್ನು ಕಾರ್ಯಗತಗೊಳಿಸಲಾಗುವುದಿಲ್ಲ ಮತ್ತು ಮುಂದಿನ ವಿಚಾರಣೆವರೆಗೂ ಮುಸ್ಲಿಮರ 2ಬಿ ಮೀಸಲಾತಿ ರದ್ದುಪಡಿಸುವ ಆದೇಶವನ್ನು ಅನುಷ್ಠಾನಗೊಳಿಸುವುದಿಲ್ಲ ಎಂಬ ಮೆಹ್ತಾ ಅವರ ಹೇಳಿಕೆಯನ್ನು ದಾಖಲಿಸಿ ಕೊಳ್ಳುವಂತೆ ದುಶ್ಯಂತ್ ದವೆ ನ್ಯಾಯಾಲಯವನ್ನು ಕೇಳಿದರು.

ದಾವೆ ಅವರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಮೆಹ್ತಾ ಅವರ ಹೇಳಿಕೆ ದಾಖಲಿಸಿಕೊಂಡು, ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿತು.

error: Content is protected !!