Monday, 26th February 2024

ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯಲ್ಲಿ 18.80 ಕೋಟಿ ರೂ. ದರೋಡೆ

ಇಂಫಾಲ: ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕಿನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯು ಭಾರತೀಯ ರಿಸರ್ವ್ ಬ್ಯಾಂಕ್ ಉಖ್ರುಲ್ ಜಿಲ್ಲೆಯ ಇತರೆ ಬ್ಯಾಂಕುಗಳು ಮತ್ತು ಎಟಿಎಂಗಳಿಗೆ ಮೀಸಲಾದ ಹಣವನ್ನು ಸಂಗ್ರಹಿಸುವ ಕರೆನ್ಸಿ ಚೆಸ್ಟ್ ಆಗಿದೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದರೋಡೆಕೋರರು ಉಖ್ರುಲ್ ಪಟ್ಟಣದ ಬ್ಯಾಂಕಿಗೆ ಆಗಮಿಸಿ, ಭದ್ರತಾ ಸಿಬ್ಬಂದಿಯನ್ನು ಬೆದರಿಸಿ ಹಣವನ್ನು ದೋಚಿದ್ದಾರೆ. ದುಷ್ಕರ್ಮಿಗಳು, ನೌಕರರು ಮತ್ತು ಭದ್ರತಾ ಸಿಬ್ಬಂದಿಯನ್ನು ಲಾಕ್ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಂಕಿನ ಹಿರಿಯ ಸಿಬ್ಬಂದಿಯಿಂದಲೇ ವಾಲ್ಟ್ ತೆರೆಯಿಸಿದ್ದು, ಬಳಿಕ ದರೋಡೆಕೋರರು ಹಣವನ್ನು ದೋಚಿದ್ದಾರೆ. ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!