Tuesday, 28th May 2024

ಒಬ್ಬ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಹಣ ನೀಡದಿದ್ದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೇ: ಸುಪ್ರೀಂ ಪ್ರಶ್ನೆ

ನವದೆಹಲಿ: ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರಗಳು ಹೀಗೆ ವ್ಯಕ್ತಿಯೊಬ್ಬನ್ನು ಗುರಿಯಾಗಿಸುವುದಾದರೆ, ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಇದೆ ಎನ್ನುವುದನ್ನು ಅರಿಯಬೇಕು’ ಎಂದು ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ರಜೆ ಕಾಲದ ನ್ಯಾಯಪೀಠ ಹೇಳಿದೆ.

ಸರ್ಕಾರಗಳು ಸಿದ್ಧಾಂತ ಮತ್ತು ಭಿನ್ನಾಭಿಪ್ರಾಯದ ಆಧಾರದ ಮೇಲೆ ಕೆಲವು ವ್ಯಕ್ತಿಗಳನ್ನು ಗುರಿಯಾಗಿಸಿರುವ ಕುರಿತು ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ, ಗೋಸ್ವಾಮಿಯವರ ಪ್ರಕರಣ ‘ವೈಯಕ್ತಿಕ ಸ್ವಾತಂತ್ರ್ಯ’ಕ್ಕೆ ಸಂಬಂಧಿಸಿರುವುದರಿಂದ ಅವರನ್ನು ಕಸ್ಟಡಿ ವಿಚಾರಣೆ ಮಾಡುವ ಅಗತ್ಯವಿದೆಯೇ’ ಎಂದು ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸಿತು.

‘ಎ ಎಂಬ ವ್ಯಕ್ತಿಗೆ ಬಿ ಎಂಬ ವ್ಯಕ್ತಿ ಹಣ ನೀಡದಿದ್ದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವಾಗುತ್ತದೆಯೇ’ ಎಂದೂ ಕೋರ್ಟ್‌ ಪ್ರಶ್ನಿಸಿತು.

ಗೋಸ್ವಾಮಿಯವರ ಪರ ನ್ಯಾಯವಾದಿ ಹರೀಶ್ ಸಾಳ್ವೆ, ‘ಚಾನೆಲ್ ವಿರುದ್ಧ ದಾಖಲಾಗಿರುವ ವಿವಿಧ ಪ್ರಕರಣಗಳನ್ನು ಉಲ್ಲೇಖಿಸಿ ಮಹಾರಾಷ್ಟ್ರ ಸರ್ಕಾರ ನನ್ನ ಕಕ್ಷಿದಾರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುತ್ತಿದೆ’ ಎಂದು ಆರೋಪಿಸಿದರು. ಈ ಪ್ರಕರಣ ವನ್ನು ಸಿಬಿಐಗೆ ವಹಿಸುವಂತೆ ಅವರು ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!