Friday, 12th July 2024

ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢಪಟ್ಟಿದೆ.

‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟಿದೆ. ಸರ್ಕಾರದ ಕೋವಿಡ್ ಮಾರ್ಗಸೂಚಿಗಳ ಅನ್ವಯ ಪ್ರತ್ಯೇಕವಾಸದಲ್ಲಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಜೂನ್ ತಿಂಗಳಲ್ಲೂ ಸಹ ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟಿತ್ತು. ಬಳಿಕ, ಜೂನ್ 12ರಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಜೂನ್ 20ಕ್ಕೆ ಬಿಡುಗಡೆಯಾಗಿದ್ದರು.

ಕಳೆದ ತಿಂಗಳು, ನ್ಯಾಷನಲ್ ಹೆರಾಲ್ಡ್ ಹಾಗೂ ಇತರೆ ಸಂಸ್ಥೆಗಳ ಮಧ್ಯೆ ನಡೆದಿರುವ ವ್ಯವಹಾರ ಹಾಗೂ ಹಣ ಅಕ್ರಮ ವರ್ಗಾ ವಣೆಯ ತನಿಖೆಯ ಭಾಗವಾಗಿ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಇತ್ತೀಚೆಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೋವಿಡ್ ದೃಢಪಟ್ಟಿತ್ತು.

 

error: Content is protected !!