Thursday, 2nd February 2023

ಮುಂಬೈ ಇಂಡಿಯನ್ಸ್‌ – ಡೆಲ್ಲಿ ಕ್ಯಾಪಿಟಲ್ಸ್‌ ಮುಖಾಮುಖಿ ಇಂದು

ಮುಂಬೈ: ಐಪಿಎಲ್‌-2022 ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ 69ನೇ ಪಂದ್ಯ ವಾಂಖೆಡೆ ಕ್ರೀಡಾಂಗಣ ದಲ್ಲಿ ಶನಿವಾರ ಆರಂಭವಾಗಲಿದೆ. ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಲಿವೆ.

ರೋಹಿತ್ ಶರ್ಮಾ ನಾಯಕತ್ವದ ಮುಂಬೈ ತಂಡ ಈಗಾಗಲೇ ಪ್ಲೇಆಫ್‌ ರೇಸ್‌ನಿಂದ ಹೊರಬಿದ್ದಿದೆ. ಆದರೆ, ಪ್ಲೇಆಫ್‌ ಕನಸು ಕಾಣುತ್ತಿರುವ ರಿಷಭ್‌ ಪಂತ್‌ ನಾಯಕತ್ವದ ಡೆಲ್ಲಿಗೆ ಗೆಲ್ಲುವುದು ಅನಿವಾರ್ಯ ವಾಗಿದೆ.

ಡೆಲ್ಲಿ ತಂಡ, ಸದ್ಯ ಪಾಯಿಂಟ್‌ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದರೆ ನಾಲ್ಕನೇ ತಂಡವಾಗಿ ಪ್ಲೇ ಆಫ್‌ಗೆ ಟಿಕೆಟ್‌ ಗಿಟ್ಟಿಸಿಕೊಳ್ಳಲಿದೆ. ಐದು ಬಾರಿಯ ಚಾಂಪಿಯನ್‌ ಮುಂಬೈ ತಂಡ ಪಾಯಿಂಟ್‌ ಪಟ್ಟಿಯಲ್ಲಿ ಕೊನೇ (ಹತ್ತನೇ) ಸ್ಥಾನದಲ್ಲಿದೆ.

ಎಲ್ಲ ಪಂದ್ಯಗಳನ್ನೂ ಆಡಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 16 ಅಂಕ ಕಲೆಹಾಕಿ ಪಾಯಿಂಟ್‌ ಪಟ್ಟಿಯಲ್ಲಿ ಪ್ರಸ್ತುತ ನಾಲ್ಕನೇ ಸ್ಥಾನದಲ್ಲಿದೆ.

ಒಂದು ವೇಳೆ ಇಂದಿನ ಪಂದ್ಯದಲ್ಲಿ ಮುಂಬೈ ಸೋತರೆ, ಆರ್‌ಸಿಬಿ ಟೂರ್ನಿಯಿಂದ ಹೊರಬೀಳಬೇಕಾಗುತ್ತದೆ.

error: Content is protected !!