Thursday, 11th August 2022

48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಿರ್ದೇಶಕ ರಾಜಮೌಳಿ 

ಹೈದರಾಬಾದ್: ರಾಜಮೌಳಿ ಅವರಿಗೆ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಶುಭಾಶಯ ಮಹಾಪೂರವೇ ಹರಿದುಬಂದಿದೆ.

2001ರಲ್ಲಿ ತೆರೆಕಂಡ ‘ಸ್ಟೂಡೆಂಟ್ ನಂಬರ್ 1’ ತೆಲುಗು ಚಿತ್ರದ ಮೂಲಕ ರಾಜಮೌಳಿ ನಿರ್ದೇಶನಕ್ಕಿಳಿದರು ನಂತರ ಸಾಕಷ್ಟು ಸಿನಿಮಾಗಳನ್ನು ನಿರ್ದೇಶಿಸಿದರು. 2015ರಲ್ಲಿ ತೆರೆಕಂಡ ‘ಬಾಹುಬಲಿ ದಿ ಬಿಗಿನಿಂಗ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ 650 ಕೋಟಿ ಬಾಚಿಕೊಳ್ಳುವ ಮೂಲಕ ಹೊಸ ದಾಖಲೆ ಬರೆಯಿತು. 2017ರಲ್ಲಿ ಬಂದ ಬಾಹುಬಲಿಯ ಎರಡನೇ ಭಾಗ 1810 ಕೋಟಿ ಬಾಚಿಕೊಳ್ಳುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿತು.

‘ಆರ್ ಆರ್ ಆರ್’ ಚಿತ್ರದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದ್ದು ಮುಂದಿನ ವರ್ಷ ಜನವರಿ 7ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಸುಮಾರು 400 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಮಾಡಿದ್ದು ರಾಮ್ ಚರಣ್ ಹಾಗೂ ಜ್ಯೂ.ಎನ್ಟಿಆರ್ ಇಬ್ಬರು ಸ್ಟಾರ್ ನಟರು ಅಭಿನಯಿಸಿದ್ದಾರೆ.