Saturday, 27th July 2024

ಯಾಂತ್ರೀಕೃತ ಮೀನುಗಾರಿಕೆಗೆ 61 ದಿನ ನಿಷೇಧ

ಉಡುಪಿ: ಜಿಲ್ಲೆಯಲ್ಲಿ ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸ ಲಾಗಿದೆ.

ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಹಾಗೂ ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿ ಮತ್ತು 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಈ 61 ದಿನಗಳಲ್ಲಿ ನಿಷೇಧವಾಗಲಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.

error: Content is protected !!