Wednesday, 17th July 2024

ಕೃಷಿ ಇಲಾಖೆಯ ನೂತನ ಕಾರ್ಯಕ್ರಮಗಳಿಗೆ ಜನವರಿ 31 ರಂದು ಚಾಲನೆ

ಧಾರವಾಡ: ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ.

ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ ಪಂಡಿತ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಇಡೀ ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡೀಸೆಲ್ ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಗಳು ಚಾಲನೆ ನೀಡಲಿದ್ದಾರೆ. ರೈತ ಮಕ್ಕಳಿಗೆ ನೀಡುವ ರೈತನಿಧಿ ವಿದ್ಯಾರ್ಥಿ ವೇತನವನ್ನು ರೈತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸುವ ಯೋಜನೆಗೆ ಚಾಲನೆ ನೀಡುವರು.

ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗಿರುವ ಹಿನ್ನೆಲೆಯಲ್ಲಿ ಸಿರಿಧಾನ್ಯಗಳ ಪ್ರದರ್ಶನ ಹಾಗೂ ಸಾವಯವ ಕೃಷಿ ನೈಸರ್ಗಿಕ ಕೃಷಿ ಕುರಿತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಕೃಷಿ ಯಂತ್ರೋಪಕರಣಗಳ ವಿತರಣೆ ಸಹ ನಡೆಯಲಿದೆ ಎಂದು ಶಿವಯೋಗಿ ಕಳಸದ ತಿಳಿಸಿದರು.

error: Content is protected !!