Sunday, 23rd June 2024

ಜಮಖಂಡಿ ಉಪವಿಭಾಗ: ನಾಲ್ಕು ತಾಲ್ಲೂಕುಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ

ಬಾಗಲಕೋಟೆ: ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆಗೆ ಮಂಗಳವಾರ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಚುಮು ಚುಮು ಚಳಿಯ ನಡುವೆ ಮುಂಜಾನೆ 7 ಗಂಟೆಯಿಂದ ಮತದಾನ ಕೇಂದ್ರದತ್ತ ಮತದಾರರು ಬರುತ್ತಿದ್ದಾರೆ.

ಬೀಳಗಿ ತಾಲ್ಲೂಕಿನ ಹೊಸ ಕೊರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಕೇಂದ್ರದಲ್ಲಿ ಮತದಾನ ನಿಧಾನವಾಗಿ ಚುರುಕುಗೊಳ್ಳುತ್ತಿರುವುದು ಕಂಡುಬಂತು.

ಜಮಖಂಡಿ ಉಪವಿಭಾಗದ ವ್ಯಾಪ್ತಿಯ ನಾಲ್ಕು ತಾಲ್ಲೂಕುಗಳ (ಜಮಖಂಡಿ, ಮುಧೋಳ, ರಬಕವಿ-ಬನಹಟ್ಟಿ, ಬೀಳಗಿ) 88 ಗ್ರಾಮ ಪಂಚಾಯಿತಿಗಳ 1397 ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯುತ್ತಿದೆ.

ಚುನಾವಣಾ ಕಾರ್ಯಕ್ಕೆ 720 ಪ್ರಿಸೆಂಡಿಗ್ ಅಧಿಕಾರಿ, 720 ಸಹಾಯಕ ಪ್ರಿಸೆಂಡಿಂಗ್ ಅಧಿಕಾರಿ ಹಾಗೂ 1440 ಮತಗಟ್ಟೆ ಅಧಿಕಾರಿ ಸೇರಿ ಒಟ್ಟು 2880 ಸಿಬ್ಬಂದಿ ನಿಯೋಜಿಸಲಾಗಿದೆ. ಜಮಖಂಡಿ ಉಪವಿಭಾಗದಲ್ಲಿ ಒಟ್ಟು 4.80,242 ಮತದಾರರು ಇದ್ದು, ಅದರಲ್ಲಿ 2.39,437 ಪುರುಷರು, 2.40,787 ಮಹಿಳೆಯರು 18 ಇತರೆ ಮತದಾರರಿದ್ದಾರೆ.

Leave a Reply

Your email address will not be published. Required fields are marked *

error: Content is protected !!