Saturday, 27th July 2024

ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ: ಸಬ್‍ ಇನ್ಸ್ಪೆಕ್ಟರ್ ಅಮಾನತು

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‍ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ತಿಳಿಸಿದರು.

ವಿವೇಕನಗರ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿ, ಈ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆ ಸಂದರ್ಭದಲ್ಲಿ ನಾಲ್ವರು ಪೊಲೀಸರು ಜತೆಯಲ್ಲಿದ್ದರು. ಈ ಬಗ್ಗೆ ವರದಿ ಬಂದ ನಂತರ ಕ್ರಮ ಕೈಗೊಳ್ಳುತ್ತೇವೆ.

ಪ್ರಕರಣವನ್ನು ಸಿಒಡಿಗೆ ವರ್ಗಾವಣೆ ಮಾಡಲಾಗುವುದು ಎಂದು ಕಮಲ್‍ಪಂಥ್ ಹೇಳಿದರು.

Leave a Reply

Your email address will not be published. Required fields are marked *

error: Content is protected !!