Tuesday, 30th May 2023

ಕೇಂದ್ರ ಸಚಿವ ಡಿ.ವಿ.ಎಸ್‌ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಬೆಂಗಳೂರಿನ ಆಸ್ಟರ್‌ ಆಸ್ಪತ್ರೆಗೆ ಭೇಟಿ ನೀಡಿ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಮತ್ತು ಸಿ.ಎನ್.ಅಶ್ವತ್ಥನಾರಾಯಣ  ಹಾಗೂ ಸಚಿವ ಬಿ.ಶ್ರೀರಾಮುಲು ಜತೆಗಿದ್ದರು. ಸೋಮವಾರ ಸಂಜೆ ಸಚಿವ ಸದಾನಂದ ಗೌಡರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

ಕಳೆದ ಭಾನುವಾರ ಮಧ್ಯಾಹ್ನದ ವೇಳೆ, ಲೋ ಬಿಪಿ ಯಿಂದಾಗಿ ಕುಸಿದ ಬಿದ್ದ ಸಚಿವ ಸದಾನಂದ ಗೌಡರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಯಿತು.

 

 

error: Content is protected !!