Friday, 1st December 2023

ರಾಜ್ಯದಲ್ಲಿ ಕರೋನಾ ಪ್ರಕರಣ ಹೆಚ್ಚಳ: ಇಂದು ಸಭೆ

ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ಸೋಮವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತಗೆ ಮಹತ್ವದ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ ಆರೋಗ್ಯ ಸೌಧದಲ್ಲಿ ಸಚಿವ ಸುಧಾಕರ್ ಅವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಸಭೆ ನಡೆಸಲಿದ್ದಾರೆ.

ಕೋವಿಡ್ ಪಾಸಿಟಿವಿಟಿ ದರ ಶೇ 2ಕ್ಕಿಂತ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುವ ಕುರಿತಂತೆ ಸಭೆ ನಡೆಸಲಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ 429, ಬಳ್ಳಾರಿ, ಚಿತ್ರದುರ್ಗ, ಗದಗ, ಹಾಸನ ಮತ್ತು ರಾಯ ಚೂರು ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 06, ಉಡುಪಿ 03, ಧಾರವಾಡ 04, ದಾವಣಗೆರೆ 02 ಸೇರಿದಂತೆ ರಾಜ್ಯದಲ್ಲಿ 24 ಗಂಟೆಯಲ್ಲಿ 463 ಮಂದಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 3656334ಕ್ಕೆ ಏರಿಕೆಯಾಗಿದೆ.  199 ಸೇರಿದಂತೆ ಇದುವರೆಗೆ 3912575 ಸೋಂಕಿತರು ಗುಣಮುಖರಾಗಿದ್ದಾರೆ.

error: Content is protected !!