Wednesday, 24th April 2024

ಮತ್ತೆ ಮೂವರಿಗೆ ಸೋಂಕು: ಹತ್ತಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜಧಾನಿ ಹಾಗೂ ಶಿವಮೊಗ್ಗ ಸೇರಿದಂತೆ 7 ಜನರಿಗೆ ಬ್ರಿಟನ್ ರೂಪಾಂತರಿ ವೈರಸ್ ಸೋಂಕು ತಗುಲಿತ್ತು. ಇದೀಗ ಮತ್ತೆ ಮೂವರಿಗೆ ಬ್ರಿಟನ್ ರೂಪಾಂತರಿ ಕೊರೋನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶದ ನಾಲ್ವರಿಗೆ ಬ್ರಿಟನ್ ರೂಪಾಂತರಿ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿರುವಂತೆ ನಾಲ್ವರು ಬ್ರಿಟನ್ ವೈರಸ್ ಸೋಂಕಿತರಲ್ಲಿ ದೆಹಲಿಯ ಒಬ್ಬರು, ಬೆಂಗಳೂ ರಿನ ಮೂವರು ಸೇರಿದ್ದಾರೆ. ಬೆಂಗಳೂರಿನಲ್ಲಿ ಈ ಮೊದಲು 3 ಶಿವಮೊಗ್ಗದ ನಾಲ್ವರು, ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಜನರಿಗೆ ಬ್ರಿಟನ್ ವೈರಸ್ ಸೋಂಕು ದೃಢಪಟ್ಟಂತಾಗಿದೆ.

 

Leave a Reply

Your email address will not be published. Required fields are marked *

error: Content is protected !!