Tuesday, 23rd April 2024

ದರ್ಶನ್ ಸಂಭಾವನೆಯಿಲ್ಲದೇ ಕೃಷಿ ಇಲಾಖೆ ರಾಯಭಾರಿಯಾಗಿರುವುದು ಮೆಚ್ಚುಗೆಯ ಸಂಗತಿ: ಬಿಎಸ್’ವೈ

ಬೆಂಗಳೂರು : ಚಲನಚಿತ್ರ ರಂಗದಲ್ಲಿ‌ ಎತ್ತರಕ್ಕೆ ರ‌ಬೆಳೆದಿರುವ ದರ್ಶನ್ ನಟನೆಯ ಜೊತೆಗೆ ಕೃಷಿಕ ರೈತಾಪಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು,ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಹೆಮ್ಮೆಯ ವಿಚಾರ‌. ರೈತರ ಪರವಾಗಿ ದರ್ಶನ್‌ಗೆ ಅಭಿನಂದನೆಗಳು. ಕೃಷಿ ಇಲಾಖೆಗೆ ಕೃಷಿ ರಂಗಕ್ಕೆ ದರ್ಶನ್ ಯಾವುದೇ ಸಂಭಾವನೆಯಿಲ್ಲದೇ ಕೃಷಿ ಇಲಾಖೆಯ ರಾಯಭಾರಿಯಾಗಿರುವುದು ಮೆಚ್ಚುಗೆಯ ಸಂಗತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾರ್ಚ್ 5,2021 ರಿಂದ ಅಧಿಕೃತವಾಗಿ ಕೃಷಿ ಕಾಯಕದ ರಾಯಭಾರಿಯಾಗಿದ್ದಾರೆ ಎಂದರು.

ಕೃಷಿ ಇಲಾಖೆ ರಾಯಭಾರಿ ನಟ ದರ್ಶನ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಸಿನಿಮಾರಂಗದಿಂದ ಈಗ ಬಿ.ಸಿ.ಪಾಟೀಲ್ ಕೃಷಿ ಸಚಿವರಾಗಿದ್ದಾರೆ. ನಾನು ಸರ್ಕಾರದ ಕೃಷಿ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತೇನೆ. ರೈತರಿಗೂ ಜನರಿಗೂ ಇರುವುದು ರಕ್ತ ಸಂಬಂಧ. ಇದಕ್ಕೆ ನಾನು ಶ್ರಮಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ‘ ಕೃಷಿ ಕೈಪಿಡಿ-2021″ಯನ್ನು ಬಿಡುಗಡೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಮೇಲ್ಮನೆ ಸದಸ್ಯ ಸಂದೇಶ್ ನಾಗರಾಜ್, ಸೇರಿದಂತೆ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!