Friday, 21st June 2024

ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ಪ್ರಯಾಣ

ಬೆಂಗಳೂರು: ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ತಡರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ದೆಹಲಿಯಲ್ಲಿ ಇಡಿ ವಿಚಾರಣೆಗೆ ಡಿ.ಕೆ.ಶಿವಕುಮಾರ್ ಹಾಜರಾಗಲಿದ್ದಾರೆ. ಸಂಜೆ ಕಾನೂನು ತಜ್ಞರ ಜೊತೆಗೆ ಅವರು ಸಮಾ ಲೋಚನೆ ನಡೆಸಲಿದ್ದು, ದಾಖಲೆ ಸಮೇತ ದೆಹಲಿಗೆ ತೆರಳಲಿದ್ದಾರೆ. ಇದೇ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಆಪ್ತರಿಗೂ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ.

error: Content is protected !!