Wednesday, 19th June 2024

ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಡಿ.ಕೆ.ಶಿವಕುಮಾರ್​..!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏ.24 ಕೊನೆಯ ದಿನವಾಗಿದೆ.

ಏ.21 ರ ಇಂದು ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಕನಕಪುರ ಕ್ಷೇತ್ರ ದಿಂದ ಸ್ಪರ್ಧಿಸುತ್ತಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಈ ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿದ್ದು, ಡಿಕೆ ಶಿವಕುಮಾರ್​ ಅವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಡಿ.ಕೆ ಶಿವಕುಮಾರ್ ಅವರು ತಮ್ಮ ನಾಮಪತ್ರ ತಿರಸ್ಕೃತವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ ಸಹೋದರ ಸಂಸದ ಡಿ.ಕೆ ಸುರೇಶ್​ ಅವರಿಂದಲೂ ನಾಮಪತ್ರ ಹಾಕಿಸಿದ್ದಾರೆ.

ಇಂದು ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

error: Content is protected !!