Saturday, 27th April 2024

ಮಾಜಿ ಸಚಿವ ರೋಷನ್‌ ಬೇಗ್ ಬಂಧನ

ಬೆಂಗಳೂರು: ಐಎಂಎ ಕಂಪನಿಯ ಸಂಸ್ಥಾಪಕ ಮನ್ಸೂರ್‌ ಖಾನ್‌ ಒತ್ತಡದಿಂದಾಗಿ ಸಿಬಿಐ ಭಾನುವಾರ ಮಾಜಿ ಸಚಿವ ರೋಷನ್‌ ಬೇಗ್‌ ಅವರನ್ನು ಬಂಧಿಸಿದೆ.

ರೋಷನ್‌ ಬೇಗ್‌ ರನ್ನು ಬಂಧಿಸಿದ ಸಿಬಿಐ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ರೋಷನ್‌ ಬೇಗ್‌ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.

ಈ ಹಿಂದೆ ಸಿಬಿಐ ಎರಡು ಬಾರಿ ನೋಟಿಸ್‌ ನೀಡಿ ರೋಷನ್‌ ಬೇಗ್‌ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಯಾವುದೇ ವಿಚಾರಣೆ ನಡೆಸಿರಲಿಲ್ಲ.

ರೋಷನ್‌ ಬೇಗ್‌ ಅವರಿಗೆ ಮನ್ಸೂರ್‌ ಖಾನ್‌ 200 ಕೋಟಿ ಸೇರಿದಂತೆ ಐಷಾರಾಮಿ ಕಾರು, ಉಡುಗೊರೆ ನೀಡಿದ್ದ ಆರೋಪ ಈ ಪ್ರಕರಣ ಬೆಳಕಿಗೆ ಬಂದಾಗಲೇ ಬಂದಿತ್ತು. ಆದರೆ ಈಗ ಮನ್ಸೂರ್‌ ಖಾನ್‌ ಒತ್ತಡ ಹಾಕಿದ್ದ ಕಾರಣ ಸಿಬಿಐ ಅಧಿಕಾರಿಗಳು ಮನೆಗೆ ತೆರಳಿ ರೋಷನ್‌ ಬೇಗ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಸಂಜೆಯ ವೇಳೆ ಬಂಧಿಸಿದೆ.

ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸು ತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷಕ್ಕೆ 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

Leave a Reply

Your email address will not be published. Required fields are marked *

error: Content is protected !!