Sunday, 19th May 2024

ತೀವ್ರ ಸ್ವರೂಪ ಪಡೆದುಕೊಂಡ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.

ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಾರಾಯಣ ಗೌಡ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸಿ ದ್ದಾರೆ. ಗಾಂಧಿನಗರ, ಮೌರ್ಯ ವೃತ್ತ, ರೇಸ್ ಕೋರ್ಸ್ ರಸ್ತೆ, ಶಿವಾನಂದ ಸರ್ಕಲ್ ಗಳ ಮೂಲಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟೌನ್ ಹಾಲ್ ಬಳಿ ಕನ್ನಡಪರ ಹೋರಾಟಗಾರರು, ಟೈಯರ್ ಗೆ ಬೆಂಕಿ ಹಚ್ಚಿ, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್ ಗಳಲ್ಲಿ ಕರೆದೊಯ್ದಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ಕನ್ನಡ ಪಕ್ಷದ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಸೇರಿದಂತೆ ಅನೇಕರು ರಾಜ್ಯ ಸರ್ಕಾರ ನಿರ್ಧಾರಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!