Sunday, 26th May 2024

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಎಫ್‌ಡಿಎ ಪರೀಕ್ಷೆ ಮರು ದಿನಾಂಕ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಎಫ್‌ಡಿಎ ಪರೀಕ್ಷೆಯ ಮರು ದಿನಾಂಕ ಪ್ರಕಟವಾಗಿದೆ. ಕಳೆದ ಜನವರಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿತ್ತು.

ಜನವರಿ 24ರಿಂದ ನಡೆಯಬೇಕಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಫೆ.28ರಿಂದ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಜನವರಿ 24 ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸಂಗತಿಯನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದರು. ಈ ಸಂಬಂಧ ಹಲವರನ್ನು ಸಿಸಿಬಿ ಬಂಧಿಸಿದೆ.

ಬಂಧಿತರಿಂದ ಪ್ರಶ್ನೆಪತ್ರಿಕೆಗಳು ಹಾಗೂ 24 ಲಕ್ಷ ರೂ ನಗದನ್ನು ಜಪ್ತಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!