Wednesday, 1st May 2024

ಮಾಧ್ಯಮ ಸಂಯೋಜಕರನ್ನಾಗಿ ಗುರುಲಿಂಗಸ್ವಾಮಿ ಹೆಚ್ ಬಿ ನೇಮಕ

 

ಗುರುಲಿಂಗಸ್ವಾಾಮಿ ನೇಮಕ
ಬೆಂಗಳೂರು:

ಮುಖ್ಯಮಂತ್ರಿಗಳ ಮಾಧ್ಯಮ‌ ಸಂಯೋಜಕರನ್ನಾಗಿ ಗುರುಲಿಂಗಸ್ವಾಮಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ವಿವಿ‘ ಪತ್ರಿಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಇದೀಗ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜನಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್ ಅಧಿಸೂಚನೆ ಹೊರಡಿಸಿದ್ದು, ಗುರುಲಿಂಗ ಸ್ವಾಮಿ, ಹೆಚ್.ಬಿ ಅವರನ್ನು ಆ.2ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಿದೆ ಎಂಬುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!