Thursday, 20th June 2024

ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ.

ಈ ಹಿಂದೆ ಜನೋತ್ಸವ ಕಾರ್ಯಕ್ರಮ ನಿಗದಿಯಾಗಿದ್ದಾಗ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ನಡೆಯಿತು. ಹೀಗಾಗಿ, ಈ ಕಾರ್ಯಕ್ರಮವನ್ನ ರದ್ದು ಮಾಡಲಾಗಿತ್ತು. ಇದೇ ತಿಂಗಳು 28ಕ್ಕೆ ಜನೋತ್ಸವ ನಡೆಸುವುದಾಗಿ ತೀರ್ಮಾನಿಸಲಾಗಿತ್ತು.

ಆದರೆ ಗೌರಿ- ಗಣೇಶ ಹಬ್ಬದಲ್ಲಿ ಜನೋತ್ಸವ ಕಾರ್ಯಕ್ರಮ ಬೇಡವೆಂದು ಮತ್ತೆ ಕಾರ್ಯಕ್ರಮವನ್ನ ಮುಂದೂಡಲಾಗಿತ್ತು.

error: Content is protected !!