Thursday, 22nd February 2024

ಡಿಸೆಂಬರ್ 2ರಿಂದ 4ರ ವರೆಗೆ 7ನೇ ವರ್ಷದ ಕಡಲೆಕಾಯಿ ಪರಿಷೆ

ಬೆಂಗಳೂರು: ಕಾಡುಮಲ್ಲೇಶ್ವರ ಗೆಳಯರ ಬಳಗ ಹಾಗೂ ಮುಜರಾಯಿ ಇಲಾಖೆ ಸಹಕಾರದಲ್ಲಿ ಕಾಡುಮಲ್ಲೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಸಂದರ್ಭ ಪ್ರತಿವರ್ಷದಂತೆ ಡಿಸೆಂಬರ್ 2ರಿಂದ 4 ರ ವರೆಗೆ ಕಡಲೆಕಾಯಿ ಪರಿಷೆ ಮತ್ತು ಬಯಲು ರಂಗ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾಡುಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ. ಶಿವರಾಂ ಅವರು, ಕಾಡುಮಲ್ಲೇಶ್ವರದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮೂರು ದಿನಗಳ ಕಾಲ ಜರುಗಲಿದೆ. ಈ ಸಂಧರ್ಭದಲ್ಲಿ 800Kaa ಕೆಜಿ ಕಡಲೆಕಾಯಿಗಳಿಂದ ಶೃಂಗರಿಸಿದ 20 ಅಡಿ ಎತ್ತರ, 20 ಅಡಿ ಉದ್ದದ ನಂದಿಯನ್ನು ಇಡಲಾಗುತ್ತದೆ ಎಂದು ತಿಳಿಸಿದರು.

ಡಿಸೆಂಬರ್ 2ರಂದು ಬೆಳಗ್ಗೆ 11 ಗಂಟೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮುಜರಾಯಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಶಾಸಕ ಮುನಿರತ್ನ, ಡಾ. ಸಿ.ಎನ್. ಅಶ್ವಥ್ ನಾರಾಯಣ್ ಅವರು ಕಡಲೆಕಾಯಿ ಪರಿಷೆ ಉದ್ಘಾ ಟನೆಯನ್ನು ಹಸಿರು ಚೈತನ್ಯೋತ್ಸವದ ಗಿಡ ನೆಡುವ ಮೂಲಕ ಚಾಲನೆ ನೀಡಲಿದ್ದಾರೆ. ಅಂದು ಸಂಜೆ ಜಿತ್ವಾವನ ಮಹಿಳಾ ಯಕ್ಷಗಾನ ಮಂಡಳಿಯ ಶೈಲಜಾ ಜೋಶಿ ಮತ್ತು ತಂಡದವರಿಂದ ಯಕ್ಷಗಾನ ಕಲಾ ಪ್ರದರ್ಶನವಿದೆ.

ಡಿಸೆಂಬರ್ 3ರಂದು ಬೆಳಗ್ಗೆ 11. 30ಕ್ಕೆ ಪಂಚಮ ಸಂಗೀತ ತಂಡದ ಎಲ್. ಶಿವಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ ಮತ್ತು ಅಂದು ಸಂಜೆ ಮಧು ಮನೋಹರ್ ಮತ್ತು ಕಾರ್ತಿಕ್ ಪಾಂಡವಪುರ ತಂಡದವರಿಂದ ಗಾನ ಗಂಧರ್ವ ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಸವಿ ನೆನಪಿನಲ್ಲಿ ಮಧುರ ನೆನಪಿನಗಾನ ಕಾರ್ಯಕ್ರಮ ನೆಡೆಯಲಿದೆ.

ಡಿಸೆಂಬರ್ 4 ರಂದು ಬೆಳಗ್ಗೆ 9.30ಕ್ಕೆ ಕಾಡುಮಲ್ಲಿಕಾರ್ಜುನ ಸ್ವಾಮಿಗೆ ಕಡಲೆಕಾಯಿ ಅಭಿಷೇಕ ಹಾಗೂ ಪ್ರಸಾದ ವಿನಿಯೋಗ ನಡೆಯಲಿದೆ. ಸಂಜೆ 6.30ಕ್ಕೆ ಭವಾನಿ ಗಾನ ವೃಂದದವರಿಂದ ವಿದೂಷಿ ಶೈಲಜ ಶ್ರೀನಾಥ್ ಮತ್ತು ತಂಡದವರಿಂದ ಶಿವ ವೀಣಾ ಗಾನ ಸಂಗಮ ಇರಲಿದೆ.

ಮಲ್ಲೇಶ್ವರ ಕಡಲೆಕಾಯಿ ಪರಿಷೆಯಲ್ಲಿ ಪರಿಸರ ಉಳಿಸಿ, ಬೆಳಸಲು ಹಸಿರು ಚೈತನ್ಯೋತ್ಸವ ಮೂಲಕ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಮಿಳುನಾಡು, ಆಂಧ್ರ, ತೆಲಂಗಾಣ ನಮ್ಮ ರಾಜ್ಯದಿಂದ ನೂರಾರು ರೈತರು ಕಡಲೆಕಾಯಿ ಪರಿಷೆಯಲ್ಲಿ ಭಾಗವಹಿಸಲಿದ್ದಾರೆ. 200 ಮಳಿಗೆಗಳಲ್ಲಿ ರೈತರು ಬೆಳೆದ ಕಡಲೆಕಾಯಿ, ತರಕಾರಿ ಮತ್ತು ಕರಕುಶಲ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಪ್ಲಾಸ್ಟಿಕ್ ಮುಕ್ತ ಅಂಗಡಿಗಳು ಇರಲಿದ್ದು, ಜನರು ಸಹಕಾರ ನೀಡಬೇಕು. ಬಂದ ಜನರಿಗೆ ಪ್ರಸಾದ ರೂಪದಲ್ಲಿ ಕಡಲೆಕಾಯಿ ವಿತರಿಸಲಾಗುವುದು. ಸರಿಸುಮಾರು 8 ಲಕ್ಷ ಜನರು ಪರಿಷೆಯಲ್ಲಿ ಪಾಲ್ಗೊಳ್ಳ ಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಾಧ್ಯಮಗೋಷ್ಟಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್, ಸಮಾಜ ಸೇವಕ ಚಂದ್ರಶೇಖರ್ ನಾಯ್ಡು, ಹಿಮಾಂಶು ಶಾಲೆಯ ಪ್ರಾಂಶುಪಾಲ ಚಂದ್ರಮೌಳಿ, ಅರ್ಚಕರಾದ ಗಂಗಾಧರ್ ದೀಕ್ಷಿತ್ ಮತ್ತು ಶಶಿಧರ್ ಇದ್ದರು.

Leave a Reply

Your email address will not be published. Required fields are marked *

error: Content is protected !!