Saturday, 27th July 2024

ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ಆಪ್ತರಿಗೂ ಎಸಿಬಿ ಶಾಕ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಆಪ್ತರ ಮೇಲೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮುಂದುವರೆಸಿದ್ದು, ಏಕಕಾಲದಲ್ಲಿ ನಗರದ 9 ಕಡೆ ಎಸಿಬಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ.

ಬೆಂಗಳೂರಿನ ಹಲವು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಕೆಲ ದಿನಗಳ ಹಿಂದೆ ಸುಧಾ ಅವರ ಮನೆ, ಅವರ ಆಪ್ತೆ ರೇಣುಕಾ ಮನೆ ಸೇರಿದಂತೆ 6 ಕಡೆಗಳಲ್ಲಿ ದಾಳಿ ನಡೆಸಿದ್ದ ವೇಳೆ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನೂರಾರು ಕೋಟಿ ಆಸ್ತಿ ಪತ್ರಗಳು ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ ಎಸಿಬಿಯಿಂದ ಇಂದು ಮತ್ತೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ರಿಯಲ್ ಎಸ್ಟೇಟ್ ಏಜೆಂಟ್ ಮಹೇಶ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಭೀಮನಕುಪ್ಪೆಯ ನಿವಾಸದಲ್ಲಿ ಇರುವ ಮಹೇಶ್ ಅವರ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಅದೇ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭು ಮನೆ ಮೇಲೂ ದಾಳಿ ನಡೆಸಲಾಗಿದೆ. ಭೀಮನಕುಪ್ಪೆಯಲ್ಲಿ ಮೂರು ಕಡೆ, ಎನ್ ಜಿಎಫ್ ಲೇಔಟ್, ರಾಮಸಂದ್ರ, ಕೆಕೆ ಲೇಔಟ್ ನಲ್ಲಿ ದಾಳಿ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಲಂಚ ಪಡೆದಿದ್ದರು ಎಂಬ ಆರೋಪದಲ್ಲಿ ಕೆಎಎಸ್​ ಅಧಿಕಾರಿ ಸುಧಾ ಅವರ ಮನೆ ಮೇಲೆ ನ.7ರಂದು ಎಸಿಬಿ ದಾಳಿ ನಡೆಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!