Saturday, 27th July 2024

ನ್ಯಾಯಾಧೀಶ ಮೋಹನ್ ಶಾಂತನಗೌಡರ್ ನಿಧನಕ್ಕೆ ಸಚಿವ ಲಿಂಬಾವಳಿ ಸಂತಾಪ

ಬೆಂಗಳೂರು: ಸುಪ್ರೀಂ ಕೋರ್ಟಿನ ನ್ಯಾಯಾಧೀಶ ಮೋಹನ್ ಶಾಂತನಗೌಡರ್ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾದ ನ್ಯಾ.ಮೋಹನ್ ಎಂ.ಶಾಂತಗೌಡರ್ ಅವರು ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಯಿತು. ಮೂಲತ: ಹಾವೇರಿ ಜಿಲ್ಲೆಯ ಹಿರೇಕೆರೂರಿಗೆ ಸೇರಿದವರು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದು ನಂತರ ಧಾರವಾಡದಲ್ಲಿ ವಕೀಲ ವೃತ್ತಿ ಕೈ ಗೊಂಡರು. 2003ರಲ್ಲಿ ರಾಜ್ಯ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.

ಅವರು ಕಾನೂನು ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅನನ್ಯವಾದದ್ದು,ಭಗವಂತ ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಅರವಿಂದ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!