Tuesday, 14th May 2024

ನೆಲಮಂಗಲ ಟೋಲ್‌ಗೇಟ್ ಬಳಿ ಸಂಚಾರ ದಟ್ಟಣೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ದೇಶದ 2ನೇ ಹಂತ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುಕ್ರವಾರ ನಡೆಯುತ್ತಿದೆ.

ಮತದಾನ ಮಾಡಲು ಬೆಂಗಳೂರು ನಗರದಿಂದ ಸಾವಿರಾರು ಜನರು ಪ್ರಯಾಣಿಸುತ್ತಿದ್ದು, ಶುಕ್ರವಾರ ನೆಲಮಂಗಲ ಟೋಲ್‌ಗೇಟ್ ಬಳಿ ಭಾರೀ ವಾಹನ ಸಂಚಾರ ದಟ್ಟಣೆ ಕಂಡುಬಂದಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ. ಮತದಾನ ಮಾಡಲು ಅನುಕೂಲವಾಗುವಂತೆ ರಜೆ ನೀಡಲಾಗಿದ್ದು, ಜನರು ಬೆಳಗ್ಗೆ ಪ್ರಯಾಣ ಆರಂಭಿಸಿದ್ದಾರೆ. ಆದ್ದರಿಂದ ಟೋಲ್‌ಗೇಟ್‌ ಬಳಿಕ ವಾಹನ ಹೆಚ್ಚಿದೆ.

ಚುನಾವಣಾ ಕರ್ತವ್ಯಕ್ಕಾಗಿ ಸರ್ಕಾರಿ ಬಸ್, ಖಾಸಗಿ ವಾಹನಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಗುರುವಾರ ಊರಿಗೆ ತೆರಳಲು ಬಸ್ ಕೊರತೆ ಕಾರಣ ಹಲವರಿಗೆ ಸಾಧ್ಯವಾಗಿಲ್ಲ. ಇಂದು ಬೆಳಗ್ಗೆ ಜನರು ಸಂಚಾರ ಆರಂಭಿಸಿದ್ದು, ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.

ಶುಕ್ರವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ನೆಲಮಂಗಲದ ಮೂಲಕ ಬೆಂಗಳೂರು ನಗರವನ್ನು ತುಮಕೂರು, ಉತ್ತರ ಕರ್ನಾಟಕ ಭಾಗವನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಹಾದು ಹೋಗುತ್ತದೆ.

ಇಂದು ತುಮಕೂರು, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳ ಮತದಾನ ನಡೆಯುತ್ತಿದೆ. ಆದ್ದರಿಂದ ಜನರು ಮತದಾನ ಮಾಡಲು ಬೆಂಗಳೂರು ನಗರದಿಂದ ಸಂಜೆ ಹೊರಟಿದ್ದು, ನೆಲಮಂಗಲದಲ್ಲಿ ಸಂಚಾರ ದಟ್ಟಣೆ ಕಂಡು ಬಂದಿದೆ.

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಕೊಡಗು-ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿಯೂ ಮತದಾನ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!